ಪುಣೆ, ಸೆ 28 ಪುಣೆ ತುಳುಕೂಟದ ರಜತ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯುತ್ತಿದ್ದು , ಸೆ 29 ರಂದು ತುಳುವರ ಗೊಬ್ಬು ಹೆಸರಿನಲ್ಲಿ ಬ್ಯಾಡ್ಮಿಂಟನ್ ಪಂದ್ಯಾಟವು ಪುಣೆಯ ವಡಗಾವ್ ನ ನಹತಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ಅದ್ಧೂರಿಯಾಗಿ ನಡೆಯಲಿದೆ .
ಬೆಳಗ್ಗೆ ೧೦. ಕ್ಕೆ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಿಂಪ್ರಿ ಬಿಲ್ಲವ ಸಂಘದ ಕಾರ್ಯದರ್ಶಿ ಶ್ಯಾಮ್ ಸುವರ್ಣ ಮತ್ತು ನೂತನ್ ಸುವರ್ಣ ದಂಪತಿ , ಪುಣೆ ಬಂಟರ ಸಂಘದ ಉತ್ತರ ಪ್ರಾದೇಶಿಕ ಸಮಿತಿಯ ಉಪಾಧ್ಯಕ್ಷರಾದ ವಸಂತ್ ಶೆಟ್ಟಿ ಭಾಗವಹಿಸಲಿದ್ದಾರೆ . ಸಂಜೆ ನಡೆಯಲಿರುವ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಬಂಟರ ಸಂಘ ಪುಣೆಯ ದಕ್ಷಿಣ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಶೇಖರ್ ಶೆಟ್ಟಿ ಮತ್ತು ಅಯ್ಯಪ್ಪ ಸ್ವಾಮಿ ಸೇವಾ ಸಂಘ ಕಾತ್ರಾಜ್ ಅಧ್ಯಕ್ಷ ಸುಭಾಷ್ ಶೆಟ್ಟಿಯವರು ಭಾಗವಹಿಸಲಿದ್ದಾರೆ .
ಹೆಚ್ಚಿನ ಸಂಖ್ಯೆಯ ತುಳುವರು ಪಂದ್ಯಾಟದಲ್ಲಿ ಪಾಲ್ಗೊಂಡು ಕ್ರೀಡೋತ್ಸವದ ಯಶಸ್ಸಿಗೆ ಸಹಕರಿಸುವಂತೆ ಪುಣೆ ತುಳುಕೂಟದ ಅಧ್ಯಕ್ಷ ದಿನೇಶ್ ಶೆಟ್ಟಿ ಕಳತ್ತೂರು, ರಜತ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರವೀಣಶೆಟ್ಟಿ ಪುತ್ತೂರು , ಪ್ರಧಾನ ಕಾರ್ಯದರ್ಶಿ ರೋಹಿತ್ ಶೆಟ್ಟಿ ನಗ್ರಿಗುತ್ತು , ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರಿಯ ಹೆಚ್ ದೇವಾಡಿಗ ಕ್ರೀಢಾ ಕಾರ್ಯಾಧ್ಯಕ್ಷ ನಾರಾಯಣ ಹೆಗ್ಡೆ , ಮಹಿಳಾ ವಿಭಾಗದ ಕ್ರೀಡಾಧ್ಯಕ್ಷೆ ರಂಜಿತಾ ಶೆಟ್ಟಿ , ಯುವ ವಿಭಾಗದ ಅಭಿಜಿತ್ ಶೆಟ್ಟಿ , ಶ್ರುತಿ ಶೆಟ್ಟಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ